1. ಕೊಂಕಣಿ ಸಾಹಿತ್ಯ ಅಕಾಡೆಮಿಯ 2017 ರ ಗೌರವ ಪ್ರಶಸ್ತಿ:

ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯು 2017 ನೇ ಸಾಲಿನ 1. ಕೊಂಕಣಿ ಸಾಹಿತ್ಯ  2. ಕೊಂಕಣಿ ಕಲೆ  3. ಕೊಂಕಣಿ ಜಾನಪದ ಈ ಮೂರು ವಿಭಾಗಗಳಲ್ಲಿ ಜೀವಮಾನದ ಸಾಧನೆಗಾಗಿ ಅರ್ಹರಿಂದ ಗೌರವ ಪ್ರಶಸ್ತಿಗಳಿಗಾಗಿ ಅರ್ಜಿ ಕರೆಯಲಾಗಿದೆ. ಈ ಪ್ರಶಸ್ತಿಯು ರೂ.50,000/- ಗೌರವಧನ, ಶಾಲು, ಸ್ಮರಣಿಕೆ, ಹಾರ, ಪ್ರಮಾಣಪತ್ರ ಫಲತಾಂಬೂಲವನ್ನು ಒಳಗೊಂಡಿದೆ. ಅಸಕ್ತರು ನೇರವಾಗಿ ಅರ್ಜಿಸಲ್ಲಿಸಬಹುದಾಗಿದೆ. ಸಂಘ ಸಂಸ್ಥೆಗಳು, ಸಾರ್ವಜನಿಕರೂ ಸಹ ಸಾಧಕರ ಹೆಸರು ಸೂಚಿಸಿ ಅರ್ಜಿ ಸಲ್ಲಿಸಬಹುದು.


2. ಕೊಂಕಣಿ ಸಾಹಿತ್ಯ ಅಕಾಡೆಮಿ 2017 ರ ಪುಸ್ತಕ ಬಹುಮಾನ:

ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯು 2017 ರ ಕ್ಯಾಲೆಂಡರ್ ವರ್ಷದಲ್ಲಿ ಪ್ರಕಟಿತವಾದ (1) ಕೊಂಕಣಿ ಕವನ ಅಥವಾ ಲೇಖನ ಅಥವಾ ವಿಮರ್ಶೆ  (2) ಕೊಂಕಣಿ ಸಣ್ಣಕತೆ ಅಥವಾ ಕಾದಂಬರಿ ಅಥವಾ ಅಧ್ಯಯನ ಕೃತಿ.(3) ಕೊಂಕಣಿಗೆ ಭಾಷಾಂತರಿಸಿದ ಕೃತಿ ಬಗ್ಗೆ ಲೇಖಕರಿಂದ, ಪ್ರಕಾಶಕರಿಂದ ಪುಸ್ತಕ ಬಹುಮಾನಕ್ಕಾಗಿ ಪುಸ್ತಕದ 4 ಪ್ರತಿಗಳ ಜೊತೆಗೆ  ಅರ್ಜಿಯನ್ನು ಅಹ್ವಾನಿಸಲಾಗಿದೆ. ಪುಸ್ತಕ ಬಹುಮಾನವು ರೂ.25,000/-ಗೌರವಧನ, ಶಾಲು, ಸ್ಮರಣಿಕೆ, ಹಾರ, ಪ್ರಮಾಣಪತ್ರ, ಫಲತಾಂಬೂಲವನ್ನು ಒಳಗೊಂಡಿದೆ.  

ಗೌರವ ಪ್ರಶಸ್ತಿ ಹಾಗೂ ಪುಸ್ತಕ ಬಹುಮಾನಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 20-12-2017. ಭರ್ತಿ ಮಾಡಿದ ಅರ್ಜಿ ಹಾಗೂ ಪುಸ್ತಕಗಳನ್ನು ರಿಜಿಸ್ಟ್ರಾರ್, ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ, ಮಹಾನಗರ ಪಾಲಿಕೆ ಕಟ್ಟಡ, ಲಾಲ್‍ಭಾಗ್ ಮಂಗಳೂರು-3  ಇವರಿಗೆ ಕಳುಹಿಸಿಕೊಡಲು ವಿನಂತಿಸಲಾಗಿದೆ.  
                              ----------------------

 

Comments powered by CComment

Latest News

Home | About | Sitemap | Contact

Copyright ©2014 www.konkaniacademy.org. Powered by eCreators

Contact Us

Karnataka Konkani Sahitya Academy
Department of Kannada and Culture, Govt. of Karnataka
City Corporation Building, Lalbagh
Mangalore - 575003, Karnataka State
Tele/Fax: 0824-2453167
Email: [email protected]
[email protected]