Print

ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಹಾಗೂ ಕೊಂಕಣಿ ಅಧ್ಯಯನ ಪೀಠ ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ ಇವರ ಸಂಯುಕ್ತ ಆಶ್ರಯದಲ್ಲಿ ದಿನಾಂಕ 14-6-2019 ರಂದು ಶುಕ್ರವಾರ ಮಧ್ಯಾಹ್ನ 3.00 ಗಂಟೆಗೆ ಧಾರವಾಡದ ಪ್ರಾದೇಶಿಕ ವಿಜ್ಞಾನ ಕೇಂದ್ರ, ಕರ್ನಾಟಕ ವಿಶ್ವವಿದ್ಯಾಲಯದಲ್ಲಿ “ ಕೊಂಕಣಿ ಅಧ್ಯಯನ ಪೀಠ “ ಕ್ಕೆ ಚಾಲನೆ ನೀಡಲಾಯಿತು. ಕರ್ನಾಟಕ ವಿಶ್ವವಿದ್ಯಾಲಯದ ಸನ್ಮಾನ್ಯ ಕುಲಪತಿಗಳಾದ ಫ್ರೊ. ಪ್ರಮೋದ್ ಗಾಯಿ ಕೊಂಕಣಿ ಅಧ್ಯಯನ ಪೀಠಕ್ಕೆ ಚಾಲನೆ ನೀಡಿದರು, ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಶ್ರೀ ಆರ್.ಪಿ.ನಾಯ್ಕ್, ಜಿ.ಎಸ್.ಬಿ. ಸಮಾಜದ ಕಾರ್ಯದರ್ಶಿಯಾದ ಶ್ರೀ ಎಂ.ಎಸ್.ಬಾಳಗಿ, ದೈವಜ್ಞ ಸಮಾಜದ ಅಧ್ಯಕ್ಷರಾದ ಶ್ರೀ ರವಿ ಎಸ್ ಗಾಂವಕರ ಇವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಕರ್ನಾಟಕ ವಿಶ್ವವಿದ್ಯಾಲಯದ ರಿಜಿಸ್ಟ್ರಾರ್, ಫ್ರೊ. ಸಿ.ಬಿ.ಹೊನ್ನು ಸಿದ್ದಾರ್ಥ, ಕೊಂಕಣಿ ಅಧ್ಯಯನ ಪೀಠದ ಸಂಯೋಜಕರಾದ ಫ್ರೊ. ಉದಯ ಎಸ್. ರಾಯಕರ್ ಹಾಗೂ ಅಕಾಡೆಮಿಯ ಸದಸ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.